ಶಿವಮೊಗ್ಗದಲ್ಲಿ ಲಿಫ್ಟ್‌ನಲ್ಲಿ 1 ಗಂಟೆ ಸಿಲುಕಿದ್ದ 9 ಮಂದಿ ರಕ್ಷಣೆ
ಲಿಫ್ಟ್‌ನಲ್ಲಿ 1 ಗಂಟೆ ಕಾಲ 9 ಮಂದಿ ಲಾಕ್ – ಹರಸಾಹಸಪಟ್ಟು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ ಶಿವಮೊಗ್ಗ: ಶಿವಮೊಗ್ಗ ನಗರದ…
ಲಿಫ್ಟ್‌ನಲ್ಲಿ 1 ಗಂಟೆ ಕಾಲ 9 ಮಂದಿ ಲಾಕ್ – ಹರಸಾಹಸಪಟ್ಟು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ ಶಿವಮೊಗ್ಗ: ಶಿವಮೊಗ್ಗ ನಗರದ ವಿಶಾಲ್ ಮಾರ್ಟ್ ಕಟ್ಟಡದಲ್ಲಿ ಲಿಫ್ಟ್ ತಾಂತ್ರಿಕ ದೋಷದಿಂದ ಏಕಾಏಕಿ ನಿಂತ ಪರಿಣಾಮ 9 ಮಂದಿ ಒಂದು ಗಂಟೆಗೂ ಹೆಚ್ಚು ಕಾಲ ಒಳಗೆ ಸಿಲುಕಿಕೊಂಡ ಘಟನೆ ನಡೆದಿದೆ. ಲಿಫ್ಟ್‌ನಲ್ಲಿ ಸಿಲುಕಿದ್ದವರನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸಪಟ್ಟು ಸುರಕ್ಷಿತವಾಗಿ ರಕ್ಷಣೆ ಮಾಡಿದ್ದಾರೆ. ತಾಂತ್ರಿಕ ಸಮಸ್ಯೆಯಿಂದ ಲಿಫ್ಟ್ ಮೊದಲ ಮಹಡಿಯಲ್ಲಿ ಹಠಾತ್ ನಿಂತಿದ್ದು, ಅದರೊಳಗೆ ಭರತ್ (37), ಅನುಷಾ (35),…
ಕುಣಿಗಲ್ ಬಳಿ ಭೀಕರ ಅಪಘಾತ – ಬೆಂಗಳೂರಿನ ತಾಯಿ, ಮಗಳು ದುರ್ಮರಣ ಕುಣಿಗಲ್: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಾಯಿ ಮತ್ತು ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಉರ್ಕೆಹಳ್ಳಿ ಬಳಿ ನಡೆದಿದೆ. ಬೆಂಗಳೂರಿನ ನಿವಾಸಿಗಳಾದ ಜಯಮಾಲಾ (60) ಹಾಗೂ ಅವರ ಮಗಳು ರಾಜೇಶ್ವರಿ (40) ಮೃತಪಟ್ಟ ದುರ್ದೈವಿಗಳು. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೂಲತಃ ರಾಯಚೂರು ಜಿಲ್ಲೆಯವರಾದ ಜಯಮಾಲಾ…
ಬೆಟ್ಟದ ನೆಲ್ಲಿಕಾಯಿ ನುಂಗಿ 2 ವರ್ಷದ ಮಗು ಸಾವು ಕೋಲಾರ: ಆಟವಾಡುತ್ತಿದ್ದ ವೇಳೆ ಬೆಟ್ಟದ ನೆಲ್ಲಿಕಾಯಿ ಗಂಟಲಲ್ಲಿ ಸಿಲುಕಿ ಎರಡು ವರ್ಷದ ಮಗು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಮಾಲೂರು ಪಟ್ಟಣದ ಗಾಂಧಿ ಸರ್ಕಲ್ ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದೆ. ರವಿ ಮತ್ತು ಮಾಲಾ ದಂಪತಿಯ ಎರಡು ವರ್ಷದ ಗಂಡು ಮಗು ವಿಜಯೇಂದ್ರ ಮೃತಪಟ್ಟ ಮಗು ಎಂದು ಗುರುತಿಸಲಾಗಿದೆ. ಮಾಹಿತಿ ಪ್ರಕಾರ, ಮಗು ಮನೆಯ ಬಳಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಬೆಟ್ಟದ ನೆಲ್ಲಿಕಾಯಿಯನ್ನು…
ದುಬಾರೆಯಲ್ಲಿ ಸಾಕಾನೆಗಳ ಕಾಳಗಕ್ಕೆ ಮಹಿಳೆ ಬಲಿ – ಪಳಗಿದ ಆನೆಗಳು ಕಾದಾಟ ಮಾಡಿದ್ದು ಯಾಕೆ? ಮಡಿಕೇರಿ: ದೇಶ-ವಿದೇಶಗಳಿಂದ ಸಾವಿರಾರು ಪ್ರವಾಸಿಗರನ್ನು ಆಕರ್ಷಿಸುವ ಕೊಡಗಿನ ಪ್ರಸಿದ್ಧ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದ ದುರಂತ ಒಂದು ಬಾರಿ ಮತ್ತೆ ಆನೆಗಳ ಸುರಕ್ಷತೆ ಮತ್ತು ನಿರ್ವಹಣೆಯ ಪ್ರಶ್ನೆಯನ್ನು ಮುಂದಿಟ್ಟಿದೆ. ಆನೆಗಳ ಜೊತೆ ಫೋಟೋ ತೆಗೆಸಿಕೊಳ್ಳಬೇಕು, ಆಹಾರ ನೀಡಬೇಕು, ಸ್ನಾನ ಮಾಡಿಸಬೇಕು ಎಂಬ ಉತ್ಸಾಹದಿಂದ ಬರುವ ಪ್ರವಾಸಿಗರ ನಡುವೆ ಇದೀಗ ಆತಂಕದ ವಾತಾವರಣ ನಿರ್ಮಾಣವಾಗಿದೆ. ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದ ಸಾಕಾನೆಗಳ ಕಾಳಗದಲ್ಲಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಭಾರೀ ಅವ್ಯವಸ್ಥೆ ಬಯಲಾಗಿದೆ.ಆಸ್ಪತ್ರೆಯಲ್ಲಿ ಅಗತ್ಯ ಔಷಧಗಳ ಕೊರತೆಯಿಂದ ಬಡ ರೋಗಿಗಳು ಸಂಕಷ್ಟ ಅನುಭವಿಸುತ್ತಿದ್ದಾರೆ. ಪ್ರತಿದಿನ ನೂರಾರು ಜನರು ಆಸ್ಪತ್ರೆಗೆ ಚಿಕಿತ್ಸೆಗಾಗಿ ಬರುತ್ತಿದ್ದರೂ, ಜ್ವರ ಮತ್ತು ಗ್ಯಾಸ್ಟ್ರಿಕ್ ಮಾತ್ರೆಗಳನ್ನು ಹೊರತುಪಡಿಸಿ ಪ್ರಮುಖ ಆಂಟಿಬಯೋಟಿಕ್ ಔಷಧಗಳು ಲಭ್ಯವಿಲ್ಲ ಎಂಬ ಆರೋಪ ಕೇಳಿಬಂದಿದೆ. ವೈದ್ಯರು ಬರೆದುಕೊಡುವ ಬಹುತೇಕ ಮದ್ದುಗಳು ಆಸ್ಪತ್ರೆಯ ಫಾರ್ಮಸಿಯಲ್ಲಿ ಸಿಗುತ್ತಿಲ್ಲ.ಆಂಟಿಬಯೋಟಿಕ್ ಚುಚ್ಚುಮದ್ದುಗಳ ಕೊರತೆಯೂ ಎದುರಾಗಿದ್ದು, ಲಭ್ಯವಿರುವ ಕೆಲವೇ ಇಂಜೆಕ್ಷನ್‌ಗಳ ಮೂಲಕ ಸಿಬ್ಬಂದಿ ಪರಿಸ್ಥಿತಿ ನಿಭಾಯಿಸುತ್ತಿದ್ದಾರೆ. ಇದೇ ವೇಳೆ ಆಸ್ಪತ್ರೆಯಲ್ಲಿ…
ಮಂಗಳೂರಿನಲ್ಲಿ ಭಾರೀ ಡ್ರಗ್ಸ್ ಜಾಲವನ್ನು ಪೊಲೀಸರು ಭೇದಿಸಿದ್ದಾರೆ.ಮುಲ್ಕಿಯಲ್ಲಿ 35 ಲಕ್ಷ ರೂಪಾಯಿ ಮೌಲ್ಯದ ಹೈಡ್ರೋವಿಡ್ ಗಾಂಜಾ ಸಾಗಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯನ್ನು ಬಂಧಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಸುಹಾನ ಎಂಬ 21 ವರ್ಷದ ವಿದ್ಯಾರ್ಥಿನಿ ಕುಂದಾಪುರದ ಪ್ರತಿಷ್ಠಿತ ಕಾಲೇಜಿನಲ್ಲಿ BCA ಅಂತಿಮ ವರ್ಷದ ವ್ಯಾಸಂಗ ಮಾಡುತ್ತಿದ್ದಳು.ಚೆನ್ನೈನಿಂದ ಮಂಗಳೂರಿಗೆ ಮಾದಕ ವಸ್ತು ತಂದು ಕಾಲೇಜು ವಿದ್ಯಾರ್ಥಿಗಳು ಮತ್ತು ಶ್ರೀಮಂತ ಗ್ರಾಹಕರಿಗೆ ಮಾರಾಟ ಮಾಡಲು ಸಂಚು ರೂಪಿಸಿದ್ದಳು ಎಂಬ ಆರೋಪ ಕೇಳಿಬಂದಿದೆ. ಮುಲ್ಕಿ ರೈಲ್ವೇ ಸ್ಟೇಷನ್ ರಸ್ತೆಯಲ್ಲಿ ಡ್ರಗ್ಸ್ ಮಾರಾಟಕ್ಕೆ…
ಬಹುಅಂಗಾಂಗ ವೈಫಲ್ಯದಿಂದ ಕಾಡಾನೆ ಸಾವು: ತಾಯಿಯ ಬಳಿ ನಿಂತು ಮರಿ ಆನೆ ಮೂಕರೋಧನೆ ರಾಮನಗರ ಜಿಲ್ಲೆಯ ಕಾವೇರಿ ವನ್ಯಜೀವಿ ವಲಯದ ಮುಗ್ಗೂರು ಅರಣ್ಯ ಪ್ರದೇಶದಲ್ಲಿ ಮನಕಲಕುವ ಘಟನೆ ನಡೆದಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಹೆಣ್ಣಾನೆಯೊಂದು ಬಹುಅಂಗಾಂಗ ವೈಫಲ್ಯದಿಂದ ಸಾವನ್ನಪ್ಪಿದ್ದು, ಅದರ ಮೃತದೇಹದ ಬಳಿ ನಿಂತು ಮರಿ ಆನೆ ಮೂಕರೋಧನೆ ವ್ಯಕ್ತಪಡಿಸಿರುವ ದೃಶ್ಯ ಎಲ್ಲರ ಮನಸ್ಸನ್ನು ಮಿಡಿಯಿಸಿದೆ. ಕನಕಪುರ ತಾಲೂಕಿನ ಮಡಿವಾಳ ಸಮೀಪದ ಮುಗ್ಗೂರು ಅರಣ್ಯ ಪ್ರದೇಶದಲ್ಲಿ ಸುಮಾರು 35 ವರ್ಷದ ಹೆಣ್ಣಾನೆ ಮೃತಪಟ್ಟಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು…
ಮಂತ್ರಾಲಯ ರಾಯರ ಮಠದಲ್ಲಿ 20 ದಿನಗಳ ಹುಂಡಿ ಎಣಿಕೆ ಪೂರ್ಣ: ₹2.78 ಕೋಟಿ ಕಾಣಿಕೆ ಸಂಗ್ರಹ ರಾಯಚೂರು ಜಿಲ್ಲೆಯ ಮಂತ್ರಾಲಯದಲ್ಲಿರುವ ಕಲಿಯುಗದ ಕಾಮಧೇನು ಎಂದೇ ಖ್ಯಾತಿ ಪಡೆದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಏಪ್ರಿಲ್ ಹಾಗೂ ಮೇ ತಿಂಗಳ 20 ದಿನಗಳ ಕಾಣಿಕೆ ಹುಂಡಿ ಎಣಿಕೆ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿದೆ. ಭಕ್ತರಿಂದ ಈ ಅವಧಿಯಲ್ಲಿ ಒಟ್ಟು ₹2,78,19,526 ರೂ. ಕಾಣಿಕೆ ಸಂಗ್ರಹವಾಗಿದೆ. ಮಠದ ಪ್ರಕಟಣೆಯ ಪ್ರಕಾರ, ಸಂಗ್ರಹವಾದ ಕಾಣಿಕೆಯಲ್ಲಿ ₹2,69,28,176 ರೂ. ಕರೆನ್ಸಿ ನೋಟುಗಳಾಗಿದ್ದು, ₹8,91,350 ರೂ….
ಹಿಟ್ಲರ್ ಕಲ್ಯಾಣ ಖ್ಯಾತಿಯ ನಟ ದಿಲೀಪ್ ರಾಜ್ ನಿಧನ: ಕನ್ನಡ ಚಿತ್ರರಂಗದಲ್ಲಿ ಶೋಕ ಕನ್ನಡ ಕಿರುತೆರೆ ಮತ್ತು ಚಿತ್ರರಂಗದಲ್ಲಿ ತಮ್ಮ ವಿಶಿಷ್ಟ ಅಭಿನಯದಿಂದ ಗುರುತಿಸಿಕೊಂಡಿದ್ದ ನಟ ದಿಲೀಪ್ ರಾಜ್ ಇಂದು ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 47 ವರ್ಷ ವಯಸ್ಸಾಗಿತ್ತು. ‘ಹಿಟ್ಲರ್ ಕಲ್ಯಾಣ’ ಧಾರಾವಾಹಿಯ ಮೂಲಕ ಕಿರುತೆರೆಗೆ ಶಕ್ತಿಶಾಲಿ ಕಮ್‌ಬ್ಯಾಕ್ ಮಾಡಿದ್ದ ದಿಲೀಪ್ ರಾಜ್, ತಮ್ಮ ಪಾತ್ರದ ಮೂಲಕ ವೀಕ್ಷಕರ ಮನಸ್ಸನ್ನು ಗೆದ್ದಿದ್ದರು. ಸಿನಿಮಾ ಮತ್ತು ಟಿವಿ ಎರಡರಲ್ಲೂ ತಮ್ಮದೇ ಆದ ಸ್ಥಾನವನ್ನು ನಿರ್ಮಿಸಿಕೊಂಡಿದ್ದ ಅವರು…
ಹೈದರಾಬಾದ್: ಹೊರ ವರ್ತುಲ ರಸ್ತೆ (ORR) ಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತೆಲುಗು ನಟ ಭರತ್ ಕಾಂತ್ ಹಾಗೂ ಅವರ ಸ್ನೇಹಿತ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. ಆದಿಬಟ್ಲಾ ಸಮೀಪ ಭಾನುವಾರ ರಾತ್ರಿ ಈ ದುರ್ಘಟನೆ ಸಂಭವಿಸಿದ್ದು, ಮೃತರನ್ನು ಆಂಧ್ರಪ್ರದೇಶದ ನೆಲ್ಲೂರು ಮೂಲದ ಕೆ. ಭರತ್ ಕಾಂತ್ ಹಾಗೂ ಜಿ. ಸಾಯಿ ತ್ರಿಲೋಕ್ ಎಂದು ಗುರುತಿಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಇಬ್ಬರೂ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲನೆ ಮಾಡುತ್ತಿದ್ದ ಭರತ್ ಕಾಂತ್ ನಿಯಂತ್ರಣ ಕಳೆದುಕೊಂಡು ಮುಂದೆ ಸಾಗುತ್ತಿದ್ದ…